ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ(114) ನಿನ್ನೆ ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 7:30 ರಿಂದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಕಲಾ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಜ್ಞಾನಭಾರತಿ ಸಮೀಪದ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತಕ್ರಿಯೆ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು. ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು. pic.twitter.com/FJlfhyRowJ
— Siddaramaiah (@siddaramaiah) November 14, 2025
