HomeLatest NewsBIG NEWS: ಕಬ್ಬು ಬೆಳೆಗಾರರ ಹೆಸರಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ: ತನಿಖೆಗೆ ಸಿಎಂ ಸಿದ್ಧರಾಮಯ್ಯ...

BIG NEWS: ಕಬ್ಬು ಬೆಳೆಗಾರರ ಹೆಸರಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ: ತನಿಖೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ ಎಂದು ಸಿಎಂ ಸಿದ್ಧರಾಮಯ್ಯ ಟೀಕಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಾನು ಪುಸ್ತಕವನ್ನು ಪೂರ್ತಿ ಓದುತ್ತೇನೆ. ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು ನೀರಿನ ಹೆಜ್ಜೆ ಪುಸ್ತಕ ಮಾಡಲಿದೆ. ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ಸೇ ಅಧಿಕಾರಿಕ್ಕೆ ಬರುವುದು ಶತಸಿದ್ಧ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹದಾಯಿ, ಕೃಷ್ಣಾ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ಧ ತೀರ್ಮಾನಗಳು ಇನ್ನೂ ಆಗಬೇಕಿದೆ. ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಅನುಕೂಲವಿದೆ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ನಾವು ವಿರೋಧಿಸಿ ಪಾದಯಾತ್ರೆ ನಡೆಸಿದೆವು. ಪಾದಯಾತ್ರೆಗೆ ಹಲವು ಟೀಕೆಗಳು ಬಂದರೂ ನಾವು ಎದೆಗುಂದದೆ ಪಾದಯಾತ್ರೆ ಯಶಸ್ವಿಗೊಳಿಸಿದೆವು ಎಂದರು.

ಮತ್ತೊಂದು ಕಡೆ ಕೃಷ್ಣಾ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಲೀ, ಬಿಜೆಪಿ ಪಕ್ಷವಾಗಲೀ, ಈ ಪಕ್ಷಗಳ ಸಂಸದರಾಗಲೀ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯಾಗಲೀ, ಆರ್ಥಿಕವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಗೆಯುತ್ತಿರುವ ದ್ರೋಹದ ಬಗ್ಗೆಯೂ ಮಾತಾಡುವುದಿಲ್ಲ. ಇಷ್ಟು ಮಾತ್ರವಲ್ಲದೆ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರ್ಕಾರ. ಈ ಬಗ್ಗೆಯೂ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ದೂರಿದ್ದಾರೆ.

ಮುಧೋಳದಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು ತಾವಲ್ಲ ಎಂದು ರೈತರು, ರೈತ ಮುಖಂಡರು ಹೇಳಿದ್ದಾರೆ. ಕಬ್ಬು ಬೆಳೆಗಾರರ ಹೆಸರಲ್ಲಿ ಮುಧೋಳದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಈ ಮೂಲಕ ಸತ್ಯಾಂಶ ಹೊರಗೆಳೆಯಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular