ದೋಹಾ: 32 ಎಸೆತಗಳಲ್ಲಿ ವೈಭವ್ ಸೂರ್ಯವಂಶಿ ಶತಕ ಗಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ನಲ್ಲಿ ಅತಿ ವೇಗದ ಶತಕ ಸಿಡಿಸಿದ ಎರಡನೇ ಭಾರತೀಯ ಬ್ಯಾಟರ್ ಆಗಿದ್ದಾರೆ.
ದೋಹಾದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಸ್ಪೋಟಕ ಶೈಲಿಯ ಬ್ಯಾಟಿಂಗ್ ನಿಂದ ಭಾರತ ಎ ತಂಡ 148 ರನ್ ಗಳಿಂದ ಯುನೈಟೆಡ್ ಅರಬ್ ಎಮಿರೇಟ್ಸ್ ತಂಡದ ವಿರುದ್ಧ ಜಯಗಳಿಸಿದೆ.
15 ಸಿಕ್ಸರ್ ಮತ್ತು 11 ಬೌಂಡರಿ ಗಳಿಸಿದ ವೈಭವ್ ಸೂರ್ಯವಂಶಿ ಒಟ್ಟು 42 ಎಸೆತಗಳಲ್ಲಿ 144 ರನ್ ಗಳಿಸಿದರು. 2018ರಲ್ಲಿ ರಿಷಬ್ ಪಂತ್ ಅವರು ದೆಹಲಿ ತಂಡದ ಪರ ಹಿಮಾಚಲ ಪ್ರದೇಶ ತಂಡದ ಎದುರು 32 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಆ ದಾಖಲೆಯನ್ನು ವೈಭವ್ ಸೂರ್ಯವಂಶಿ ಸರಿಗಟ್ಟಿದ್ದಾರೆ. ಟಿ20 ಮಾದರಿಯಲ್ಲಿ ಶರವೇಗದ ಶತಕ ಸಿಡಿಸಿದವರ ಪಟ್ಟಿಯಲ್ಲಿ ಅಭಿಷೇಕ್ ಶರ್ಮಾ ಮತ್ತು ಗುಜರಾತ್ ನ ಊರ್ವಿಲ್ ಪಟೇಲ್ ಜಂಟಿ ಅಗ್ರಸ್ಥಾನದಲ್ಲಿದ್ದಾರೆ. ಅವರು 28 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ.
