ಬಳ್ಳಾರಿ: ಪಕ್ಷಿಯ ನಾಯಕನನ್ನೇ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದಡಿ ಬಳ್ಳಾರಿ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷ ಜಿ.ಟಿ. ಪಂಪಾಪತಿ ಅವರ ಮೇಲೆ ಸಂಡೂರು ತಾಲೂಕಿನ ತೋರಣಗಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಗಣಿ ಸಾಗಾಣಿಕೆದಾರದಿಂದ 40 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. ಬೆದರಿಕೆ ಹಾಕಿ ಸುಲಿಗೆ ಮಾಡಿದ್ದಾರೆ ಎಂದು ಮೂವರ ವಿರುದ್ಧ ದೂರು ನೀಡಲಾಗಿದೆ. ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಿ.ಟಿ. ಪಂಪಾಪತಿ, ಕುಮಾರಸ್ವಾಮಿ ಮತ್ತು ಯುಟ್ಯೂಬ್ ಚಾನೆಲ್ ಬಸವರಾಜ್ ವಿರುದ್ಧ ದೂರು ದಾಖಲಿಸಲಾಗಿದೆ.
ಗಣಿ ಸಾಗಾಣಿಕೆದಾರ ಚಂದ್ರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ. ಟ್ರೇಡಿಂಗ್ ಕಂಪನಿಯ ಮೂಲಕ ಚಂದ್ರು, ವಿಶ್ವನಾಥ್ ಅದಿರು ಸಾಗಿಸುತ್ತಿದ್ದರು. ಗೋವಾದ ಖಾಸಗಿ ಕಂಪನಿಗೆ ಅದಿರು ಸಾಗಾಟದ ವೇಳೆ ಬೆದರಿಸಿ ಹಣ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
