ಬೆಂಗಳೂರು: ಶೀಘ್ರವೇ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ಈಗಾಗಲೇ 13,000 ಶಿಕ್ಷಕರ ನೇಮಕ ಮಾಡಲಾಗಿದ್ದು, ಮತ್ತೆ 12 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು. ಅನುದಾನಿತ ಸಂಸ್ಥೆಗಳಲ್ಲಿ 6 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಬೇಡಿಕೆ ಅನುಗುಣವಾಗಿ ಪಟ್ಟೇತರ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ಎಸ್ಎಸ್ಎಲ್ಸಿ ಉತ್ತೀರ್ಣ ಅಂಕವನ್ನು ಶೇ. 35 ರಿಂದ 33ಕ್ಕೆ ಇಳಿಸುವ ಶಿಕ್ಷಣ ಇಲಾಖೆ ನಿರ್ಧಾರದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಕೆಪಿಎಸ್ ಶಾಲೆಗಳಲ್ಲಿ ಸ್ಕಿಲ್ ಅಟ್ ಸ್ಕೂಲ್ ಕಾರ್ಯಕ್ರಮ ಹಾಗೂ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಕೆ ಜಾರಿಗೆ ತರುವುದರಿಂದ ವಿದ್ಯಾರ್ಥಿಗಳು ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಸಚಿವರು ವಿದ್ಯಾರ್ಥಿಗಳ ಉತ್ತರ ನೀಡಿದ್ದಾರೆ.
