ಬೆಂಗಳೂರು : ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಎವಿ ಆರ್ ಗ್ರೂಪ್ ಸಂಸ್ಥಾಪಕ ವೆಂಕಟೇಶ್ ರೆಡ್ಡಿ ಎಂದು ಗುರುತಿಸಲಾಗಿದೆ. ಶ್ರೀಲಂಕಾದಿಂದ ಬೆಂಗಳೂರಿಗೆ ಬರುವಾಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಿನಿಮಾ ನಿರ್ಮಾಪಕ, ಉದ್ಯಮಿ ಆಗಿರುವ ವೆಂಕಟೇಶ್ ರೆಡ್ಡಿ ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
