ಬೆಂಗಳೂರು : ‘ನವೆಂಬರ್ ಕ್ರಾಂತಿ’ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ್ದಾರೆ.
ಕೆಂಪೇಗೌಡ ಏರ್ ಪೋರ್ಟ್ ಮೂಲಕ ವಿಮಾನದಲ್ಲಿ ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣಿಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಸಚಿವ ಹೆಚ್.ಸಿ ಮಹದೇವಪ್ಪ ಸಾಥ್ ನೀಡಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಲಿದ್ದು, ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಇಂದು ಸಂಜೆಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಕಪಿಲ್ ಸಿಬಲ್ ಬರೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿಎಂ ಸಿದ್ದರಾಮಯ್ಯ ಈ ವೇಳೆ ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
