ಚಿಕ್ಕಮಗಳೂರು: ಲೈಫ್ ಲೈನ್ ಫೀಡ್ಸ್ ಇಂಡಿಯಾ ಪ್ರೈ.ಲಿಮಿಟೆಡ್ ಕಂಪನಿಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿ ದಿಢೀರ್ ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ರತ್ನಗಿರಿ ರಸ್ತೆಯಲ್ಲಿರುವ ಪ್ರಧಾನ ಕಚೇರಿ, ಕಲ್ಯಾಣ ನಗರದಲ್ಲಿರುವ ಮಾಲೀಕರ ಮನೆ ಸೇರಿದಂತೆ ಹಲವೆಡೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇದೇ ವೇಳೆ ಬೆಂಗಳೂರು, ಮಂಗಳೂರಿನಲ್ಲಿರುವ ಬ್ರ್ಯಾಂಚ್, ಕಚೇರಿಗಳ ಮೇಲೂ ಏಕಏಕಾಲದಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಪ್ರಕರಣ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
