HomeLatest NewsSHOCKING : ರಾಜ್ಯದಲ್ಲಿ ಹುಲಿ, ನವಿಲುಗಳ ಹತ್ಯೆ ಬೆನ್ನಲ್ಲೇ ಬೆಳಗಾವಿಯಲ್ಲಿ 28 ಕೃಷ್ಣಮೃಗಗಳ ಮಾರಣಹೋಮ.!

SHOCKING : ರಾಜ್ಯದಲ್ಲಿ ಹುಲಿ, ನವಿಲುಗಳ ಹತ್ಯೆ ಬೆನ್ನಲ್ಲೇ ಬೆಳಗಾವಿಯಲ್ಲಿ 28 ಕೃಷ್ಣಮೃಗಗಳ ಮಾರಣಹೋಮ.!

ಬೆಳಗಾವಿ : 28 ಕೃಷ್ಣಮೃಗಗಳು ಏಕಾಏಕಿ ನಿಗೂಡ ವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ನಡೆದಿದೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ವಿಷ ಪ್ರಾಶನ ಆಗಿದ್ಯಾ..? ಅಥವಾ ಫುಡ್ ಪಾಯ್ಸನ್ ನಿಂದ ಕೃಷ್ಣ ಮೃಗಗಳು ಮೃತಪಟ್ಟಿದ್ಯಾ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.

ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮೊನ್ನೆ 8 ಜಿಂಕೆಗಳು ಸಾವನ್ನಪ್ಪಿದ್ದವು. ಇಂದು ಬೆಳಗ್ಗೆ ಮತ್ತೆ 20 ಜಿಂಕೆಗಳು ಸಾವನ್ನಪ್ಪಿವೆ . ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈ ಘಟನೆ ನಡೆದಿದೆ. ಮೊನ್ನೆ 8 ಜಿಂಕೆಗಳು ಸಾವನ್ನಪ್ಪಿದ್ದವು. ಇಂದು ಮತ್ತೆ 20 ಮೃತಪಟ್ಟಿವೆ.ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅರಣ್ಯ,ಸಚಿವ ಈಶ್ವರ ಬಿ. ಖಂಡ್ರೆ ಅವರು ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular