ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ರಾಜ್ಯ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ಪದವೀಧರರು ನಾಗರಿಕ ಸೇವೆಗಳಾದ ಐ.ಎ.ಎಸ್.ಅಥವಾ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಭಾರತದ/ ಕರ್ನಾಟಕದ ಆಡಳಿತಾತ್ಮಕ ಸೇವೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡುವ ಸಲುವಾಗಿ “ಚಾಣಕ್ಯ ಆಡಳಿತ ತರಬೇತಿ ಯೋಜನೆ” ಯನ್ನು ಹಮ್ಮಿಕೊಳ್ಳಲಾಗಿದೆ.
ಈ ಯೋಜನೆಯಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಐ.ಎ.ಎಸ್ ಅಥವಾ ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೇ ಎದುರಿಸಲು ತರಬೇತಿ ಪಡೆಯುವ ಸಂಬಂಧ 2025-26ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪಾವತಿಸಲಾದ ತರಬೇತಿ ಶುಲ್ಕದ ಮೊತ್ತದಲ್ಲಿ ಗರಿಷ್ಠ ರೂ.1 ಲಕ್ಷ ಗಳಿಗೆ ಮಿತಿಗೊಳಿಸಿ ಡಿಬಿಟಿ ಮೂಲಕ ನೇರವಾಗಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡಲಾಗುವುದು.
ಆದ್ದರಿಂದ ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿ ನೋಂದಾಯಿಸಿಕೊಳ್ಳುವ ಫಲಾನುಭವಿಗಳು ಬ್ರಾಹ್ಮಣ ಸಮುದಾಯದ ಫಲಾನುಭವಿಗಳು ಡಿಸೆಂಬರ್, 15 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ವೆಬ್‍ಸೈಟ್ www.ksbdb.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತಾ ಮಾನದಂಡಗಳು ಯೋಜನೆಯ ಕುರಿತಾದ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8029605888/ 8762249230 ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ.
