ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೂಡ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ.
ಬಿಹಾರ ಚುನಾವಣೆಯಲ್ಲಿ ಆರ್.ಜೆ.ಡಿ-ಕಾಂಗ್ರೆಸ್ ಮೈತ್ರಿಗೆ ತೀವ್ರ ಮುಖಭಂಗವಾಗಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ನಾಯಕರ ಸಭೆ ಕರೆದಿದ್ದಾರೆ. ಈ ನಡುವೆ ರಾಹುಲ್ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ ಹಾಅಗು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಜೊತೆ ಚರ್ಚೆ ನಡೆಸಿ, ಮುಂದೆ ರಾಜ್ಯಗಳಲ್ಲಿ ಕಾಂಗ್ರೆಸ್ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳು, ಪಕ್ಷ ಸಂಘಟನೆ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕಾರ್ಯಗಳ ಬಗ್ಗೆ ಚ್ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
