ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಾರಿನಲ್ಲಿ ಹರುಯಾಣ ಮೂಲದ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ವಿರಾಜಪೇಟೆಯ ಲಿಂಗದಪುರ ಅರಣ್ಯ ಪ್ರದೇಶದ ಚೆಕ್ ಪೋಸ್ಟ್ ಬಳಿ ಪೊಲೀಸರು ಕಾಣುತ್ತಿದಂತೆ ಕಾರನ್ನು ಬೇರೆ ಕಡೆ ತಿರುಗಿಸಲು ಚಾಲಕ ಯತ್ನಿಸಿದ್ದಾನೆ. ಇದರಿಂದ ಅನುಮಾನಗೊಂಡ ಚೆಕ್ ಪೋಸ್ಟ್ ಸಿಬ್ಬಂದಿ ತಕ್ಷಣ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಚೆಕ್ ಪೋಸ್ಟ್ ಸಿಬ್ಬಂದಿ ಕೊಡಗಿಸ ಸಿದ್ದಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಕಾರಿನ ಸಮೇತ ಕಾರಿನಲ್ಲಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ವೇಳೆ ಹರಿಯಾಣ ಮೂಲದ ರಾಕೇಶ್ ಕುಮಾರ್, ಆತನ ಪತ್ನಿ ನಾನ್ಕಿದೇವಿ ಇಬ್ಬರು ಸ್ನೇಹಿತರು ಮೈಸೂರಿನ ಮೇಟಗಳ್ಳಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ನಾನ್ಕಿದೇವಿ ಶುಕ್ರವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳಂತೆ. ನಾನ್ಕಿದೇವಿ ಪತಿ ರಾಕೇಶ್ ಕುಮಾರ್ ಕೆಲಸ ಮುಗಿಸಿ ವಾಪಾಸ್ ಮನೆಗೆ ಬಂದಾಗ ಪತ್ನಿ ಶವವಾಗಿ ಪತ್ತೆಯಾಗಿದ್ದಳು. ಗಾಬರಿಯಾದ ಆತಾ ತನ್ನ ಇಬ್ಬರು ಸ್ನೇಹಿತರಾದ ವಿಕಾಸ್ ಹಾಗೂ ಸತ್ ವೀರ್ ಜೊತೆ ಸೇರಿ ಪತ್ನಿಯ ಶವವನ್ನು ಕಾರಿನಲ್ಲಿ ಕೊಡಗಿಗೆ ತೆಗೆದುಕೊಂಡು ಬಂದಿದ್ದಾರೆ. ಈ ವೇಳೆ ಕೊಡಗಿನ ಲಿಂಗಪುರ ಫಾರೆಸ್ಟ್ ಚೆಕ್ ಪೋಸ್ಟ್ ನಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ತಪಾಸಣೆ ವೇಳೆ ಸಿಇಕ್ಕಿ ಬಿದ್ದಿದ್ದಾರೆ. ನಾನ್ಕಿದೇವಿ ಮೂರ್ಛೇ ರೋಗದಿಂದಲೂ ಬಳಲುತ್ತಿದ್ದರಂತೆ. ಮೈಸೂರುನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪತಿ ರಾಕೇಶ್ ಕುಮಾರ್ ತಿಳಿಸಿದ್ದಾನೆ.
