BREAKING: ರಾಜ್ಯ ಸಚಿವ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಸಚಿವ ಸಂಪುಟ ಪುನಾರಚನೆಗೆ ಒಪ್ಪಿಗೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಚರ್ಚಿಸಿ ಸಂಪುಟ ಪುನಾರಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read