ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸೋಮವಾರ ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಲಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ, ಬೆಳೆ ಹಾನಿ ಪರಿಹಾರ, ರಾಜ್ಯಕ್ಕೆ ನೀಡಬೇಕಿರುವ ಅನುದಾನ ಬಿಡುಗಡೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
