ಕಾರವಾರ: ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿಯೊಬ್ಬರು ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ.
ಶಿವಮೊಗ್ಗ ಮೂಲದ ದೇವೇಂದ್ರಪ್ಪ (45) ಸಮುದ್ರ ಪಾಲಾಗಿರುವ ವ್ಯಕ್ತಿ. ಶಿವಮೊಗ್ಗದಿಂದ ಮುರುಡೇಶ್ವರಕ್ಕೆ ಸ್ನೇಹಿತರ ಜೊತೆಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ.
ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿಯಿಂದ ದೇವೇಂದ್ರಪ್ಪಗಾಗಿ ಶೋಧ ನಡೆಸಲಾಗಿದೆ. ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
