ಬೆಂಗಳೂರು: PGNEET-25 ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಆನ್ ಲೈನ್ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.18ರಿಂದ 20ರವರೆಗೆ ಅವಕಾಶ ನೀಡಲಾಗಿದೆ.
ನ.21ರಂದು ಸಂಜೆ 4ಗಂಟೆಗೆ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.
ನ.24ರಂದು ಬೆಳಿಗ್ಗೆ 10ಗಂಟೆವರೆಗೆ ಇಚ್ಛೆ/ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ನ.25ರಂದು ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಹಾಗೂ ನ.26ರಂದು ಬೆಳಿಗ್ಗೆ 11 ಗಂಟೆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಶುಲ್ಕ ಪಾವತಿ, ಕಾಲೇಜಿಗೆ ವರದಿ ಮಾಡಿಕೊಳ್ಳುವ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುತ್ತದೆ.
ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ನ.17ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
#PGNEET-25: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಆನ್ ಲೈನ್ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.18ರಿಂದ 20ರವರೆಗೆ ಅವಕಾಶ ನೀಡಲಾಗಿದೆ. ನ.21ರಂದು ಸಂಜೆ 4ಗಂಟೆಗೆ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ನ.24ರಂದು ಬೆಳಿಗ್ಗೆ 10ಗಂಟೆವರೆಗೆ ಇಚ್ಛೆ/ಆಯ್ಕೆಗಳನ್ನು ಅದಲು-ಬದಲು… pic.twitter.com/Nr8CZN3Dz6
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) November 15, 2025
