ಬೈಕ್ ಟ್ಯಾಕ್ಸಿ ಸೇವೆ ನೀಡುವ ವಾಹನ ವಶಕ್ಕೆ ಪಡೆದು ದಂಡ ವಿಧಿಸಲಾಗಿದೆ. ಬೈಕ್ ಟ್ಯಾಕ್ಸಿ ಸೇವೆಯನ್ನು ಪಡೆಯದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 6421 of 2022(MV) ಗೆ ಸಂಬಂದಿಸಿದಂತೆ ದಿನಾಂಕ: 02-04-2025 ರಂದು ಹೊರಡಿಸಿರುವ ಆದೇಶದಲ್ಲಿ ಒM/S Uber India System Pvt. Ltd Ropper, Transpatation Service Pvt.Ltd ಮತ್ತು ANI Technologics Pvt.Ltd ರವರು ಸಾರ್ವಜನಿಕರಿಗೆ ನೀಡುತ್ತಿರುವ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಆದೇಶಿಸಿರುತ್ತಾರೆ.
ಘನ ನ್ಯಾಯಾಲಯದ ಆದೇಶದ ವಿರುದ್ದ ಈ Aggrigrater Company ಗಳು ದ್ವಿ- ಸದಸ್ಯ ಪೀಠದ ಮುಂದೆ ರಿಟ್ Appeal ಅನ್ನು ಸಲ್ಲಿಸಿದ್ದು, ಪ್ರಕರಣ ವಿಚಾರಣೆಗೆ ಬಾಕಿ ಇರುತ್ತದೆ. ಆದಾಗ್ಯೂ ಈ ಅಗ್ರಿಗೇಟರ್ ಕಂಪನಿಗಳು ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಮ್ಮ ಮೊಬೈಲ್ ಅಪ್ಲಿಕೇಶನ್ ಮೂಲಕ ಅನಧಿಕೃತವಾಗಿ ಬೈಕ್ ಟ್ಯಾಕ್ಸಿ ಸೇವೆಯನ್ನು ಪ್ರಾರಂಬಿಸಿವೆ.
ಈಗಾಗಲೇ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ, ಹಾಸನದಿಂದ ಈ ರೀತಿಯ ಮೊಬೈಲ್ ಅಪ್ಲಿಕೇಶನ್ ಮೂಲಕ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿರುವ ವಾಹನಗಳನ್ನು ವಶಕ್ಕೆ ಪಡೆದು ಸೂಕ್ತ ದಂಡ ವಿದಿಸಲಾಗಿರುತ್ತದೆ. ಆದುದರಿಂದ ಈ ರೀತಿಯಲ್ಲಿ ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿನೆ ಮಾಡಿ ಬೈಕ್ ಟ್ಯಾಕ್ಸಿ ಸೇವೆಯನ್ನು ನೀಡುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸಬೇಕು ಮತ್ತು ಸಾರ್ವಜನಿಕರು ಈ ರೀತಿ ಮೊಬೈಲ್ ಅಪ್ಲಿಕೇಶನ್ ಮೂಲಕ ಬೈಕ್ ಟ್ಯಾಕ್ಸಿ ಸೇವೆಯನ್ನು ಪಡೆಯಬಾರದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.
