ಬೆಂಗಳೂರು: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷರು, ಸಂಸದರು ಆಗಿರುವ ಅಖಿಲೇಶ್ ಯಾದವ್ ಬೆಂಗಳೂರಿನಲ್ಲಿ ಇಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಪರಮೇಶ್ವರ್ ನಿವಾಸಕ್ಕೆ ಆಗಮಿಸಿದ ಅಖಿಲೇಶ್ ಯಾದವ್ ಸೌಜನ್ಯಯುತ ಭೇಟಿ ನೀಡಿದ್ದರು. ಅಖಿಲೇಶ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಪರಮೇಶ್ವರ್ ಕುಶಲೋಪರಿ ವಿಚಾರಿಸಿದ್ದಾರೆ. ಭೇಟಿ ವೇಳೆ ಉಭಯ ನಾಯಕರು ವಿವಿಧ ವಿಚಾರಗಳ ಕುರಿತಾಗಿ ಚರ್ಚಿಸಿದ್ದಾರೆ.
