ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ 165 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅರ್ಜಿ ಆಹ್ವಾನಿಸಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಅಭಿಯಂತರ, ಕಿರಿಯ ಅಭಿಯಂತರ, ಸಹಾಯಕ, ಕಿರಿಯ ಸಹಾಯಕ, ಮಾಪನ ಓದುಗ, ಉಗ್ರಾಣ ಪಾಲಕ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ಗಮನಿಸಬಹುದಾಗಿದೆ.
