HomeLatest Newsಪ್ರಿಯಾಂಕ್ ಖರ್ಗೆ ತವರು ಚಿತ್ತಾಪುರದಲ್ಲಿ ಇಂದು ಆರ್.ಎಸ್.ಎಸ್. ಪಥಸಂಚಲನ: ಬಿಗಿ ಪೊಲೀಸ್ ಭದ್ರತೆ

ಪ್ರಿಯಾಂಕ್ ಖರ್ಗೆ ತವರು ಚಿತ್ತಾಪುರದಲ್ಲಿ ಇಂದು ಆರ್.ಎಸ್.ಎಸ್. ಪಥಸಂಚಲನ: ಬಿಗಿ ಪೊಲೀಸ್ ಭದ್ರತೆ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಇಂದು ಆರ್.ಎಸ್.ಎಸ್. ಪಥಸಂಚಲನ ನಡೆಯಲಿದೆ.

ಬಹುಚರ್ಚಿತವಾಗಿ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಪಥಸಂಚಲನ ಹೈಕೋರ್ಟ್ ಅನುಮತಿಯೊಂದಿಗೆ ನವೆಂಬರ್ 16ರಂದು ಮಧ್ಯಾಹ್ನ 3.30 ರಿಂದ ಸಂಜೆ 5:45 ರವರೆಗೆ ನಡೆಯಲಿದೆ. ಬಜಾಜ್ ಕಲ್ಯಾಣ ಮಂಟಪದಿಂದ ಎಪಿಎಂಸಿ ಆವರಣದವರೆಗೆ ಪಥಸಂಚಲನ ನಡೆಯಲಿದ್ದು, 1.5 ಕಿಲೋ ಮೀಟರ್ ಪಥಸಂಚಲನಕ್ಕೆ ಸ್ಥಳೀಯ ಆಡಳಿತ ಅನುಮತಿ ನೀಡಿದೆ.

ತಾಲೂಕು ಆಡಳಿತ ಹಾಗೂ 1000 ಪೊಲೀಸರು ಭಾರೀ ಭದ್ರತೆ ಕೈಗೊಂಡಿದ್ದಾರೆ. ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಗರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಅಕ್ಟೋಬರ್ 16 ರಂದು ಚಿತ್ತಾಪುರದಲ್ಲಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್‌ಎಸ್‌ಎಸ್ ಪಥಸಂಚಲನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು, ಇತ್ತೀಚೆಗೆ ನ್ಯಾಯಾಲಯ ಅನುಮತಿ ನೀಡಿದ್ದು, ಇಂದು ಪಥಸಂಚಲನ ನಡೆಯಲಿದೆ.

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಇದಕ್ಕೆ ಪ್ರಿಯಾಂಕ್ ಖರ್ಗೆ ಕಾರಣ ಎಂದು ಆರ್.ಎಸ್.ಎಸ್. ಕೋರ್ಟ್ ಮೊರೆ ಹೋಗಿತ್ತು. ಬಳಿಕ ಕೋರ್ಟ್ ಅಂಗಳದಲ್ಲಿ ಕಲಬುರಗಿ ಜಿಲ್ಲಾಡಳಿತ ಅನುಮತಿ ನೀಡಿತ್ತು. ನವೆಂಬರ್ 13ರಂದು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅನುಮತಿ ದೊರೆತಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular