HomeLatest NewsBREAKING: ಹೆಚ್ಚು ಅಂಕ ನೀಡುವುದಾಗಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಉಪನ್ಯಾಸಕನ ವಿರುದ್ಧ ಕೇಸ್ ದಾಖಲು

BREAKING: ಹೆಚ್ಚು ಅಂಕ ನೀಡುವುದಾಗಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಉಪನ್ಯಾಸಕನ ವಿರುದ್ಧ ಕೇಸ್ ದಾಖಲು

ಮೈಸೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಮೈಸೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ದೂರು ನೀಡಿದ್ದಾರೆ.

ವಿದ್ಯಾರ್ಥಿನಿಯ ದೂರು ಆಧರಿಸಿ ಉಪನ್ಯಾಸಕ ಭರತ್ ಭಾರ್ಗವ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎನ್ಎಸ್ ಸೆಕ್ಷನ್ 126(2), 75(2), 351(2)ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಹೆಚ್ಚು ಅಂಕ ನೀಡುತ್ತೇನೆ, ಕೆಲಸ ಕೊಡಿಸುತ್ತೇನೆ ಎಂದು ಆಮಿಷವೊಡ್ಡಿ ಹೊರಗಡೆ ಪಬ್ ಗೆ ಹೋಗಿ ಮಜಾ ಮಾಡೋಣ ಬಾ ಎಂದು ಕಿರುಕುಳ ನೀಡಿದ್ದಾರೆ. ಈ ಸಂಬಂಧ ಮಹಿಳಾ ಉಪನ್ಯಾಸಕರಿಗೆ ವಿದ್ಯಾರ್ಥಿನಿ ದೂರು ನೀಡಿದ್ದರು. ದೂರು ನೀಡಿದ್ದಕ್ಕೆ ಉಪನ್ಯಾಸಕ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನಾನು ಹೇಳಿದಂತೆ ಕೇಳದಿದ್ದರೆ ಫೇಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಉಪನ್ಯಾಸಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular