ಬಾಗಲಕೋಟೆ: ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಗೋದಾವರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ 10 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸಮೀರವಾಡಿ ಗೋದಾವರಿ ಕಾರ್ಖಾನೆ ಆವರಣದಲ್ಲಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗಳಿಗೆ ಪ್ರತಿಭಟನಾ ನಿರತ ರೈತರು ಬೆಂಕಿ ಹಚ್ಚಿದ್ದರು. ಈ ಪ್ರಕರಣ ಸಂಬಂಧ ಮಹಾಲಿಂಗಪುರ ಠಾಣೆ ಪೊಲೀಸರು 10 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕಬ್ಬು ಬೆಳೆಗೆ 3500ರೂಪಾಯಿ ನಿಗದಿಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಕೆಲ ದಿನಗಳ ಹಿಂದೆ ನಡೆಸಿದ್ದ ಪ್ರತಿಭಟನೆ ವೇಳೆ ರೊಚ್ಚಿಗೆದ್ದ ರೈತರು ಕಬ್ಬು ತುಂಬಿದ್ದ 20ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.
