ಕಾರವಾರ: ಆಕಸ್ಮಿಕ ಬೆಂಕಿ ಅವಘಡಕ್ಕೆ ಮನೆ ಹೊತ್ತಿ ಉರಿದ ಪರಿಣಾಮ ವೃದ್ಧೆಯೊಬ್ಬರು ಸಜೀವದಹನವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ನಡೆದಿದೆ.
ಪಕೀರವ್ವ ರಾಮಣ್ಣ ಆಲೂರ (70) ಮೃತ ವೃದ್ಧೆ. ಮನೆಯಲ್ಲಿ ಏಕಾಂಗಿಯಾಗಿ ವಾಸವಿದ್ದ ಪಕೀರವ್ವ , ರಾತ್ರಿ ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪಕೀರವ್ವ ಜೀವಂತವಾಗಿ ಬೆಂಕಿಗಾಹುತಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಯಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
