HomeLatest Newsಪೆಟ್ರೋಲ್ ಬಂಕ್ ಗಳಲ್ಲಿ ಗ್ರಾಹಕರಿಗೆ ಉಚಿತವಾಗಿ ನೀಡಬೇಕಾದ ಮೂಲ ಸೌಕರ್ಯಗಳ ವಿವರ

ಪೆಟ್ರೋಲ್ ಬಂಕ್ ಗಳಲ್ಲಿ ಗ್ರಾಹಕರಿಗೆ ಉಚಿತವಾಗಿ ನೀಡಬೇಕಾದ ಮೂಲ ಸೌಕರ್ಯಗಳ ವಿವರ

ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ ಈ 6 ಉಚಿತ ಸೌಲಭ್ಯಗಳನ್ನು ನೀಡಬೇಕಿದ್ದು, ಕೊರತೆ ಕಂಡು ಬಂದಲ್ಲಿ ಗ್ರಾಹಕರು ದೂರು ನೀಡುವಂತೆ ತಿಳಿಸಲಾಗಿದೆ.

ವಾಹನದ ಟೈರ್ ಗಳಿಗೆ ಉಚಿತ ಗಾಳಿಯ ಸೌಲಭ್ಯ, ಪೆಟ್ರೋಲ್ ಬಂಕ್ ಆವರಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಗ್ರಾಹಕರು ಮತ್ತು ಸಿಬ್ಬಂದಿ ಇಬ್ಬರಿಗೂ ಶೌಚಾಲಯ ಸೌಲಭ್ಯಗಳು, ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸಾ ಕಿಟ್‌ ಗಳ ಸೌಲಭ್ಯಗಳು, ಗ್ರಾಹಕರು ನಿಖರವಾದ ಇಂಧನವನ್ನು ಪಡೆಯುವಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸಹಕರಿಸುವುದು, ಹಾಗೂ ಪೆಟ್ರೋಲ್ ಮತ್ತು ಡೀಸೆಲ್‌ ನ ಗುಣಮಟ್ಟದ ಕುರಿತು ಗ್ರಾಹಕರಿಗೆ ಮಾಹಿತಿ ಒದಗಿಸುವುದು, ಪೆಟ್ರೋಲ್ ಬಂಕ್ ಆವರಣದಲ್ಲಿ ತುರ್ತು ಸಂಪರ್ಕ ಸಂಖ್ಯೆಗಳನ್ನು ಗ್ರಾಹಕರಿಗೆ ಕಾಣುವಂತೆ ಸ್ಪಷ್ಟ ಪ್ರದರ್ಶನ ಮಾಡುವುದು ಸಾರ್ವಜನಿಕರಿಗೆ ಕಡ್ಡಾಯವಾಗಿ ಒದಗಿಸಬೇಕಾಗಿರುತ್ತದೆ.

ಪೆಟ್ರೋಲ್ ಬಂಕ್‌ಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಕಂಡುಬಂದಲ್ಲಿ ಗ್ರಾಹಕರು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಸೇಲ್ಸ್ ಆಫೀಸರ್ 7022945432, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಸೇಲ್ಸ್ ಆಫೀಸರ್ 7033096059, ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್‌ಸೇಲ್ಸ್ ಆಫೀಸರ್ 9188692387 ಅಧಿಕಾರಿಗಳಿಗೆ ದೂರು ನೀಡುವಂತೆ ಹಾಸನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular