ಧಾರವಾಡ: ಎಎಸ್ಐ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.
ಕಲಘಟಗಿ ಎಎಸ್ಐ ಚಂದ್ರಕಾಂತ್ ಹುಟಗಿ ಹೃದಯಾಘಾತದಿಂದ ಸಾವನ್ನಪ್ಪಿದವರು. ಪೊಲೀಸ್ ಠಾಣೆಯಿಂದ ಮನೆಗೆ ವಿಶ್ರಾಂತಿ ಪಡೆಯಲು ಹೋದವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಆರೋಗ್ಯವಾಗಿಯೇ ಇದ್ದ ಎಎಸ್ಐ ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದು, ಹಿರಿಯ ಅಧಿಕಾರಿಗಳು ಕಂಬನಿ ಮಿಡಿದಿದ್ದಾರೆ.
