BIG NEWS: ಆಪರೇಷನ್ ಟ್ರ್ಯಾಕ್ ಡೌನ್: ಒಂದೇ ದಿನದಲ್ಲಿ 257 ಆರೋಪಿಗಳು ಅರೆಸ್ಟ್

ಚಂಡೀಗಢ: ಆಪರೇಷನ್ ಟ್ರ್ಯಾಕ್ ಡೌನ್ ಹೆಸರಿನಲ್ಲಿ ಹರಿಯಾಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಒಣ್ದೇ ದಿನ 257 ಆರೋಪಿಗಳನ್ನು ಬಂಧಿಸಿದ್ದಾರೆ.

ಅಪರಾಧಕೃತ್ಯಗಳಲ್ಲಿ ಭಾಗಿಯಾದವರನ್ನು ಬಂಧಿಸುವ ಅತಿದೊಡ್ಡ ಕಾರ್ಯಾಚರಣೆ ಇದಾಗಿದ್ದು, ಕಳೆದ ಒಂದು ವಾರದಿಂದ ಹರಿಯಾಣ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯದ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ಈ ಕಾರ್ಯಾಚರಣೆ ನಡೆಯುತ್ತಿದೆ.

ಕೊಲೆ ಯತ್ನ, ಹತ್ಯೆ, ವಸೂಲಿ, ಅಕ್ರಮ ಆಯುಧ ಸಂಗ್ರಹ, ಡ್ರಗ್ ಮಾಫಿಯಾ, ಅತ್ಯಾಚಾರ ಯತ್ನ, ಅತ್ಯಾಚಾರ ಸೇರಿದಂತೆ ಹಲವು ಪ್ರಕರ್ಣಗಳಲ್ಲಿ ಭಾಗಿಯಾದವರನ್ನು ಬಂಧ್ಸಲಾಗುತ್ತಿದೆ. 42 ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುಅವ್ 62 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. 9 ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ 23 ಜನ ಹಾಗೂ 13 ಕೊಲೆ ಯತ್ನ ಪ್ರಕರಣಗಳಲ್ಲಿ 16 ಜನರನ್ನು ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read