ಬಳ್ಳಾರಿ: ಸಿರಗುಪ್ಪ ತಾಲೂಕಿನ ಮಣ್ಣೂರು ಸೂಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪೆದ್ದರಾಜು ಕ್ಯಾಂಪ್ ನಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಮರೇಶ್(24), ಶ್ರುತಿ(20) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಹೇಳಲಾಗಿದೆ. ಇವರಿಗೆ ಮದುವೆಯಾಗಿ ಒಂದು ವರ್ಷವಾಗಿದ್ದು, ಮಕ್ಕಳಾಗಿರಲಿಲ್ಲ. ಪತಿ-ಪತ್ನಿ ನಡುವೆ ಕೌಟುಂಬಿಕ ಕಲಹದಿಂದ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಕುಟುಂಬದವರು ಹೊಲಕ್ಕೆ ತೆರಳಿದ ಸಂದರ್ಭದಲ್ಲಿ ಮನೆಯಲ್ಲಿದ್ದ ಅಮರೇಶ್, ಶ್ರುತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿರಿಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
