ಕೊಪ್ಪಳ: ಮಹಿಳೆಗೆ ಮದ್ಯ ಕುಡಿಸಿ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಹೇಯ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ನಡೆದಿದೆ.
39 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಇಲ್ಲಿನ ಮದ್ಲೂರು ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೊಸಪೇಟೆ ಮೂಲದ ಮಹಿಳೆ ಪರಿಚಯಸ್ಥರಿಂದ ಹಣ ಪಡೆಯಲು ಕುಷ್ಟಗಿ ಪಟ್ಟಣಕ್ಕೆ ಬಂದಿದ್ದರು. ಈ ವೇಳೆ ಮಹಿಳೆಯನ್ನು ಬೈಕ್ ನಲ್ಲಿ ಕರೆದೊಯ್ದ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ.
ಅಸ್ವಸ್ಥಗೊಂಡ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿವೈಎಸ್ಪಿ ಮುತ್ತಣ್ಣ ಸವರಗೋಳ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯಿಂದ ಮಾಹಿತಿ ಪಡೆದಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
