ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಕೆಲ ಸಚಿವರು ಸಾಥ್ ನೀಡಿದ್ದಾರೆ.
ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ರಾಹುಲ್ ಗಾಂಧಿ ಸೂಚನೆ ಮೇರೆಗೆ ಇಂದು ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಸಚಿವ ಸಂಪುಟ ಪುನಾರಚನೆ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಲಿದ್ದಾರೆ.
ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿಇವರಾದ ಹೆಚ್.ಸಿ.ಮಹದೇವಪ್ಪ, ಅಶೋಕ್ ಪಟ್ಟಣ್, ಎ.ಎಸ್.ಪೊನ್ನಣ್ಣ ಸೇರಿದಂತೆ ನಾಯಕರು ಸಾಥ್ ನೀಡಿದ್ದಾರೆ.
