ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ವೈರಲ್ ಕೇಸ್ ಗೆ ಸಂಬಂಧಿಸಿದಂತೆ ನಟ ದರ್ಶನ್ ಆಪ್ತ ಧನ್ವೀರ್ ವಿಚಾರಣೆಗೆ ಹಾಜರಾಗಲು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ವೈರಲ್ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಈ ಹಿನ್ನೆಲೆ ನಟ ದರ್ಶನ್ ಆಪ್ತ ಧನ್ವೀರ್ ವಿಚಾರಣೆಗೆ ಹಾಜರಾಗಿದ್ದಾರೆ.
ದರ್ಶನ್ ಆಪ್ತ ಧನ್ವೀರ್ ಪರಪ್ಪನ ಅಗ್ರಹಾರದ ಕೈದಿಗಳ ವಿಡಿಯೋ ರಿಲೀಸ್ ಮಾಡಿದ್ರಾ ಎಂಬ ಅನುಮಾನದ ಹಿನ್ನೆಲೆ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.ಈ ಎಲ್ಲಾ ಬೆಳವಣಿಗೆಗಳ ನಡುವೆ ನಟ ದರ್ಶನ್ ಆಪ್ತ ಧನ್ವೀರ್ ಗೆ ಪೊಲೀಸರು ಮತ್ತೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು.
