HomeLatest NewsBREAKING: ಕಲಬುರಗಿಯಲ್ಲಿ ಮತ್ತೆ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ: ಟನ್ ಕಬ್ಬಿಗೆ 3500 ರೂ ಬೆಲೆ...

BREAKING: ಕಲಬುರಗಿಯಲ್ಲಿ ಮತ್ತೆ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ: ಟನ್ ಕಬ್ಬಿಗೆ 3500 ರೂ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ

ಕಲಬುರಗಿ: ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಮತ್ತೆ ಕಲಬುರಗಿಯಲ್ಲಿಯೂ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಬೆಳಗಾವಿ, ಬಾಗಲಕೋಟೆ ಬಳಿಕ ಇದೀಗ ಕಲಬುರಗಿಯಲ್ಲಿ ಕಬ್ಬು ಬೆಳೆಗಾರರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಸರ್ಕಾರ ನಿಗದಿಪಡಿಸಿರುವ 3300 ರೂಪಾಯಿ ಸಾಲದು, ಟನ್ ಕಬ್ಬಿಗೆ 3500 ರೂಪಾಯಿ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸಿ ಕಚೇರಿ ಮುಂಭಾಗದಿಂದ ಎಸ್ ವಿಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಡಿಸಿ ಕಚೇರಿ ಬಳಿಯೇ ರಸ್ತೆಯಲ್ಲಿ ಧರಣಿ ಮುಂದುವರೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular