ಬೆಂಗಳೂರು : ನವೆಂಬರ್ 30 ರಂದು ನಿಗದಿಯಾಗಿದ್ದ ‘KSCA ( ಕರ್ನಾಟಕ ರಾಜ್ಯ ಕ್ರಿಕೆಟ್ ಸಂಖ್ಯೆ ) ಪದಾಧಿಕಾರಿಗಳ ಚುನಾವಣೆ ಡಿ.30 ಕ್ಕೆ ಮುಂದೂಡಿಕೆಯಾಗಿದೆ.
ಚುನಾವಣೆ ಸ್ಪರ್ಧೆಗೆ ಅಭ್ಯರ್ಥಿಗಳ ಅರ್ಹತೆ ಬಗ್ಗೆ ಗೊಂದಲ ಉಂಟಾಗಿತ್ತು. ಹೀಗಾಗಿ ಡಿಸೆಂಬರ್ 30ಕ್ಕೆ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.
ನವೆಂಬರ್ 30 ಕ್ಕೆ ಕೆಎಸ್ಸಿಎ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಹಾಗೂ ಉಳಿದ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಕೆಎಸ್ಸಿಎ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಪತ್ರಕರ್ತ ಕೆ.ಎನ್.ಶಾಂತಕುಮಾರ್ ಹಾಗೂ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸ್ಪರ್ಧೆ ಮಾಡಿದ್ದರು.
