ಬೆಂಗಳೂರು: ಸಧ್ಯಕ್ಕೆ ಯಾಯಕತ್ವ ಬದಲಾವಣೆ ವಿಚಾರ ಚರ್ಚೆಯೇ ಇಲ್ಲ. ಈ ವಿಚಾರ ಅಪ್ರಸ್ತುತ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಸಧ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯೇ ಇಲ್ಲ. ಒಂದು ವೇಳೆ ಸಚಿವ ಸಂಪುಟ ಪುನಾರಚನೆ ಅಥವಾ ಯಾವುದೇ ಪ್ರಮುಖ ರಾಜಕೀಯ ನಿರ್ಧಾರ ಕೈಗೊಳ್ಲುವುದಿದ್ದರೂ ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.
ಏನೇ ವಿಚಾರಗಳಿದ್ದರೂ ಸಿಎಂ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಚರ್ಚೆ ಬೇಡ ಎಂದರು.
