ಬೆಂಗಳೂರು: ದೆಹಲಿಯಲ್ಲಿ ರಾಜ್ಯ ರಾಜಕೀಯ ಚಟುವಟಿಕೆ ಚುರುಕುಗೊಂಡಿದೆ. ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ.
ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಭೇಟಿಗೆ ಸಮಯ ನಿಗದಿಯಾಗಿದೆ. ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದು, ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲಿದ್ದಾರೆ. ಮತ್ತೊಂದೆಡೆ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಿಂದ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಖರ್ಗೆ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಕಬ್ಬು ಬೆಳೆಗಾರರ ಸಮಸ್ಯೆ, ಬೆಳೆಹಾನಿ ಪರಿಹಾರ, ರಾಜ್ಯಕ್ಕೆ ನೀಡಬೇಕಿರುವ ಅನುದಾನಗಳ ಬಗ್ಗೆ ಚರ್ಚಿಸಲಿದ್ದಾರೆ.
