ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
ಬಿಗ್ ಬಾಸ್ ಸ್ಪರ್ಧೆ ವೇಳೆ ರಿಷಾ ಬಟ್ಟೆಗಳನ್ನು ವಾಷ್ ರೂಂ ನಲ್ಲಿ ಇಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಗಿಲ್ಲಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಅಲ್ಲದೇ ಗಿಲ್ಲಿ ಮಹಿಳೆಯರ ಬಗ್ಗೆ ಅವಮಾನಕರವಾಗಿ ಮಾತನಾಡಿದ್ದಾರೆ ಎಂದು ದೂರಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಮಹಿಳಾ ಆಯೋಗ ವಿಡಿಯೋ ಫುಟೇಜ್ ಪರಿಶೀಲನೆ ಮಾಡ್ದ್ದು, ಮೇಲ್ನೋಟಕ್ಕೆ ಗಿಲ್ಲಿ ನಟ ತಪ್ಪಾಗಿ ನಡೆದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಸಿಗದ ಕಾರಣಕ್ಕೆ ಪ್ರಕರಣವನ್ನು ಆಯೋಗದ ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.
