ನವದೆಹಲಿ: ರಾಜ್ಯ ಸಚಿವ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಚಿವ ಸಂಪುಟ ಪುನಾರಚನೆ, ರಾಜ್ಯ ರಾಜಕೀಯ ಬೆಳವಣಿಗೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಅವರು ಸಮ್ಮತಿ ಸೂಚಿಸಲಿದ್ದಾರೆಯೇ? ಎಂಬುದನ್ನು ಕಾದುನೋಡಬೇಕಿದೆ. ಒಟ್ಟಾರೆ ರಾಜ್ಯ ರಾಜಕೀಯ ಚಟುವಟಿಕೆ ದೆಹಲಿ ಮಟ್ಟದಲ್ಲಿ ಗರಿಗೆದರಿದೆ.
