BREAKING: ಬಾಂಗ್ಲಾದೇಶದ ಹಿತಾಸಕ್ತಿಗೆ ಬದ್ಧ: ಶೇಖ್ ಹಸೀನಾ ತೀರ್ಪಿನ ಬಗ್ಗೆ ಭಾರತ ಪ್ರತಿಕ್ರಿಯೆ

ನವದೆಹಲಿ: ಬಾಂಗ್ಲಾದೇಶದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿದ ಕೆಲವು ಗಂಟೆಗಳ ನಂತರ ಭಾರತ ಪ್ರತಿಕ್ರಿಯೆ ನೀಡಿದ್ದು, ತೀರ್ಪನ್ನು ಗಮನಿಸಲಾಗಿದೆ ಮತ್ತು ನೆರೆಯ ದೇಶದಲ್ಲಿ ಶಾಂತಿ, ಪ್ರಜಾಪ್ರಭುತ್ವ ಮತ್ತು ಸ್ಥಿರತೆಯನ್ನು ಪರಿಗಣಿಸಿ ಎಲ್ಲಾ ಪಾಲುದಾರರೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುತ್ತದೆ ಎಂದು ಹೇಳಿದೆ.

ಭಾರತದ ವಿದೇಶಾಂಗ ಸಚಿವಾಲಯ(MEA)ವು ಬಾಂಗ್ಲಾದೇಶದ  ಜನರ ಹಿತಾಸಕ್ತಿಗಳಿಗೆ ಬದ್ಧವಾಗಿದೆ ಎಂದು ಹೇಳಿದೆ.

ದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ(ICT) ಮಾನವೀಯತೆಯ ವಿರುದ್ಧದ ಅಪರಾಧಗಳಲ್ಲಿ ಹಸೀನಾ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಮರಣದಂಡನೆ ವಿಧಿಸಿದೆ.

ಬೃಹತ್ ಪ್ರತಿಭಟನೆಗಳ ನಡುವೆಯೂ ಕಳೆದ ವರ್ಷ ಆಗಸ್ಟ್ 5 ರಂದು ಬಾಂಗ್ಲಾದೇಶದಿಂದ ಪಲಾಯನ ಮಾಡಿದ ನಂತರ ಅವಾಮಿ ಲೀಗ್ ನಾಯಕಿ ಭಾರತದಲ್ಲಿ ವಾಸಿಸುತ್ತಿದ್ದಾರೆ.

ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಸಂಬಂಧಿಸಿದಂತೆ ‘ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ’ ಘೋಷಿಸಿದ ತೀರ್ಪನ್ನು ಭಾರತ ಗಮನಿಸಿದೆ ಎಂದು MEA ಹೇಳಿದೆ.

ಆಪ್ತ ನೆರೆಯ ರಾಷ್ಟ್ರವಾಗಿ, ಆ ದೇಶದಲ್ಲಿ ಶಾಂತಿ, ಪ್ರಜಾಪ್ರಭುತ್ವ, ಸೇರ್ಪಡೆ ಮತ್ತು ಸ್ಥಿರತೆ ಸೇರಿದಂತೆ ಬಾಂಗ್ಲಾದೇಶದ ಜನರ ಹಿತಾಸಕ್ತಿಗಳಿಗೆ ಭಾರತ ಬದ್ಧವಾಗಿದೆ. ಆ ನಿಟ್ಟಿನಲ್ಲಿ ನಾವು ಯಾವಾಗಲೂ ಎಲ್ಲಾ ಪಾಲುದಾರರೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುತ್ತೇವೆ ಎಂದು MEA ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read