ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಸಂಜೆ ಸಿಎಂ ಪತ್ನಿ ಪಾರ್ವತಿ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಶ್ವಾಸಕೋಶ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಬಳಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಜ್ಞ ವೈದ್ಯರಿಂದ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
