HomeLatest NewsBREAKING: ಕೆಂಪುಕೋಟೆ ಬಳಿ ಕಾರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಮತ್ತಿಬ್ಬರು ಸಾವು: ಸಾವಿನ ಸಂಖ್ಯೆ 15ಕ್ಕೆ ಏರಿಕೆ

BREAKING: ಕೆಂಪುಕೋಟೆ ಬಳಿ ಕಾರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಮತ್ತಿಬ್ಬರು ಸಾವು: ಸಾವಿನ ಸಂಖ್ಯೆ 15ಕ್ಕೆ ಏರಿಕೆ

ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಕಾರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕಾರ್ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ದೆಹಲಿಯ ಎಲ್.ಎನ್.ಜೆ.ಪಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದಾರೆ. ವಿನಾಯಕ ಪಾಠಕ್(50), ಮೊಹಮ್ಮದ್ ಲುಕ್ಮಾನ್(73) ಮೃತಪಟ್ಟವರು.

ನವೆಂಬರ್ 10 ರಂದು ದೆಹಲಿಯ ಕೆಂಪುಕೋಟೆಯ ಬಳಿ ಕಾರ್ ಸ್ಫೋಟಗೊಂಡಿದ್ದು, ಕಾರ್ ನಲ್ಲಿ ಸ್ಪೋಟಕ ಸಾಗಿಸುತ್ತಿದ್ದ ಉಗ್ರ ಡಾ..ಉಮರ್ ಮೃತಪಟ್ಟಿದ್ದ. ಸ್ಪೋಟದಿಂದ ಅನೇಕರು ಗಾಯಗೊಂಡಿದ್ದರು. ಇದುವರೆಗೆ 15 ಮಂದಿ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular