BREAKING : ರಾಜ್ಯ ಸಚಿವ ಸಂಪುಟ ಪುನಾರಚನೆಗೆ ‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಲವು.!

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಲವು ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸಚಿವ ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಅವರ ಜೊತೆ ಚರ್ಚೆ ನಡೆಸಿ ಮಾಹಿತಿ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡೋಣ ಎಂದು ಖರ್ಗೆ ಬಳಿ ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕೆ ಖರ್ಗೆ ಕೂಡ ಒಲವು ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಎಷ್ಟು ಸ್ಥಾನ ಬದಲಾವಣೆ ಮಾಡಬಹುದು, ಯಾರನ್ನ ಬದಲಾವಣೆ ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯರಿಂದ ಖರ್ಗೆ ಮಾಹಿತಿ ಪಡೆದಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿನ್ನೆ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಸಚಿವ ಸಂಪುಟ ಪುನಾರಚನೆಗೆ ಒಪ್ಪಿಗೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಚರ್ಚಿಸಿ ಸಂಪುಟ ಪುನಾರಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ .
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸುವ ಸಾಧ್ಯತೆಯಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read