ತುಮಕೂರು: ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ 3ರಷ್ಟು ಮೀಸಲಾತಿ ನೀಡಲು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಏರ್ಪಡಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಪೊಲೀಸ್ ಇಲಾಖೆಯ ಎಲ್ಲಾ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇಕಡ 3ರಷ್ಟು ಮೀಸಲಾತಿ ನೀಡಲಾಗಿದೆ. ಈ ಸೌಲಭ್ಯವನ್ನು ಎಲ್ಲಾ ಇಲಾಖೆಗಳ ನೇಮಕಾತಿಗೂ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೇರೆ ಇಲಾಖೆಗಳ ನೇಮಕಾತಿ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಸದ್ಯಕ್ಕೆ ಶೇಕಡ 2ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಅದನ್ನು ಶೇಕಡ 3ಕ್ಕೆ ವಿಸ್ತರಿಸಲಾಗುವುದು. ಪೊಲೀಸ್ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ಶೇಕಡ 3ರಷ್ಟು ಮೀಸಲಾತಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
