ಬೆಳಗಾವಿ: ಬೆಳಗಾವಿ ಜಿಲ್ಲೆಯ ಭೂತರಾಯನಹಟ್ಟಿ ಗ್ರಾಮದ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಗಳಲೆ ರೋಗಗಿಂದ 31 ಕೃಷ್ಣಮೃಗಗಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಪಶುಪಾಲನಾ ಇಲಾಖೆಗೆ ಕಟ್ಟೆಚ್ಚರಕ್ಕೆ ಸೂಚಿಸಿದೆ.
ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿಗೆ ಗಳಲೆ ರೋಗ ಕಾರಣವಗಿದೆ. ಮೃಗಾಲಯದಲ್ಲಿದ್ದ 38 ಕೃಷ್ಣಮೃಗಗಳಲ್ಲಿ 31 ಕೃಷ್ಣಮೃಗಗಳು ಈ ರೋಗಕ್ಕೆ ಬಲಿಯಾಗಿದೆ. ಮೃಗಾಲಯದಲ್ಲಿರುವ ಉಳಿದ ಪ್ರಾಣಿಗಳಿಗೆ ಗಳಲೆ ರೋಗ ಹರಡದಂತೆ ಮುಂಜಾಗೃತಾ ಕ್ರಮವಾಗಿ ಚಿಕಿತ್ಸೆ, ಮುನ್ನೆಚ್ಚರಿಕೆ ವಹಿಸಲಾಗಿದೆ.
ಆದರೆ ಗಳಲೆ ರೋಗ ಮೃಗಾಲಯದ ಸುತ್ತಮುತ್ತಲ ಗ್ರಾಮಗಳಿಗೂ ಹರಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಅರಣ್ಯ ಇಲಾಖೆ ಪಶುಪಾಲನಾ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದಿದೆ.
ಸಸ್ಯಹಾರದ ಪ್ರಾಣಿಗಳಿಗೂ ಗಳಲೆ ರೋಗ ಹರಡುವ ಸಾಧ್ಯತೆ ಇದೆ. ಸುತ್ತಮುತ್ತಲಿನ ಗ್ರಾಮಸ್ಥರು ಸಸ್ಯಹಾರದ ಪ್ರಾಣಿಗಳನ್ನು ಸಾಕಿರುವವರು ಎಚ್ಚರಿಕೆ ವಹಿಸಬೇಕು. ಗಳಲೆರೋಗ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
