ಮಂಗಳವಾರ ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಿಂದ ನಿರಂತರ ಗುಂಡಿನ ಚಕಮಕಿ ನಡೆದಿದೆ.
ವರದಿಗಳ ಪ್ರಕಾರ, ಕುಖ್ಯಾತ ನಕ್ಸಲ್ ಕಮಾಂಡರ್ ಹಿಡ್ಮಾ ಈ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ
ಪೊಲೀಸರ ಪ್ರಕಾರ, ಭದ್ರತಾ ಪಡೆಗಳು ಮುಂಜಾನೆ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು.
ಮೂಲಗಳ ಪ್ರಕಾರ, ನಕ್ಸಲೀಯ ಹಿಡ್ಮಾ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾನೆ. ಅವನ ಶವವನ್ನು ಗುರುತಿಸಲಾಗಿಲ್ಲ.
ಆಂಧ್ರಪ್ರದೇಶ-ಛತ್ತೀಸ್ಗಢ ಗಡಿಯಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿ ಕಾರ್ಯಕರ್ತರ ನಡುವೆ ನಡೆದ ಭೀಕರ ಗುಂಡಿನ ಚಕಮಕಿಯ ನಂತರ ಆರು ನಕ್ಸಲೀಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾವೋವಾದಿಗಳು ಬೀಡುಬಿಟ್ಟಿದ್ದ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ. ಹಿಡ್ಮಾ ಅವರ ಪತ್ನಿ ರಾಜೆ ಅಲಿಯಾಸ್ ರಾಜಕ್ಕಾ ಕೂಡ ಸತ್ತವರಲ್ಲಿ ಸೇರಿದ್ದಾರೆ. ಪೊಲೀಸರ ಪ್ರಕಾರ, ಭದ್ರತಾ ಪಡೆಗಳು ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು.
