ಬೀದರ್: ಸೌದಿ ಅರೇಬಿಯಾದ ಮೆಕ್ಕಾ-ಮದೀನಾ ರಸ್ತೆಯಲ್ಲಿ ಬಸ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 45 ಜನ ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದಾರೆ. ಅವರಲ್ಲಿ ಇಬ್ಬರು ಕನ್ನಡಿಗರೂ ಸೇರಿದ್ದಾರೆ.
ಇದೇ ಅಪಘಾತದಲ್ಲಿ ಬೀದರ್ ಮೂಲದ ಮಹಿಳೆ ರಹಮತ್ ಬಿ (80) ಎಂಬ ಮಹಿಳೆ ಮೃತಪಟ್ಟಿದ್ದಾರೆ. ಬೀದರ್ ನ ಮೈಲೂರಿನ ಸಿಎಂಸಿ ಕಾಲೋನಿ ನಿವಾಸಿಯಾದ ರಹಮತ್, ಹೈದರಾಬಾದ್ ಮೂಲಕ ಸೌದಿ ಅರೇಬಿಯಾಗೆ ತೆರಳಿದ್ದರು.
ಸೌದಿ ಅರೇಬಿಯಾದ ಮೆಕ್ಕಾದಿಂದ ಮದೀನಾಕ್ಕೆ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದಿದೆ. ಇದೇ ಬಸ್ ನಲ್ಲಿ ಬೀದರ್ ಮಹಿಳೆ ಪ್ರಯಾಣಿಸುತ್ತಿದ್ದರು. ಇನ್ನು ಹುಬ್ಬಳ್ಳಿ ಮೂಲದ ಅಬ್ದುಲ್ ಘಣಿ ಎಂಬಾತ ಕೂಡ ಇದೇ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
