ಬೆಂಗಳೂರು: ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಕರ್ನಾಟಕದೊಂದಿಗೆ ಇರುವ ತಮ್ಮ ನಂಟು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ನೆನಪುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಅಖಿಲೇಶ್ ಯಾದವ್ ಅವರು ತಾವು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದಿದ್ದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
‘ಕರ್ನಾಟಕದ ನೆನಪು, ಹಳೆಯ ಬಂಧ, ಧನ್ಯವಾದಗಳು ಬೆಂಗಳೂರು!’ ಎಂದು ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದ ಅಖಿಲೇಶ್ ಯಾದವ್ ಗೃಹ ಸಚಿವ ಪರಮೇಶ್ವರ್ ಅವರ ಸದಾಶಿವ ನಗರ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಸಂಬಂಧಿಯೊಬ್ಬರ ಮನೆಗೆ ಬಂದಿದ್ದ ವೇಳೆ ಗೃಹ ಸಚಿವ ಪರಮೇಶ್ವರ್ ಅವರ ಮನೆಗೂ ಭೇಟಿ ಕೊಟ್ಟಿದ್ದರು. ಈ ವೇಳೆ ಇದು ಸೌಜನ್ಯದ ಹಾಗೂ ಶಿಷ್ಟಾಚಾರ ಭೇಟಿ ಅಷ್ಟೇ ಎಂದು ಅಖಿಲೇಶ್ ತಿಳಿಸಿದ್ದರು.
ಇದೇ ವೇಳೆ ಅಖಿಲೇಶ್ ಯಾದವ್ ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದಿದ್ದರು. ಇದೀಗ ಆ ನೆನಪಿನ ಬುತ್ತಿಯನ್ನು ಹಂಚಿಕೊಂಡಿದ್ದಾರೆ.
