ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕಾ ಸಂಪಾದಕರಿಗೆ “ನ್ಯೂಸ್ ರೂಂ ನಲ್ಲಿ AI ಹಾಗೂ ಫ್ಯಾಕ್ಟ್ ಚೆಕ್” ಕುರಿತು ಒಂದು ದಿನದ ತರಬೇತಿ ಹಮ್ಮಿಕೊಂಡಿದೆ. ನವೆಂಬರ್ 29 ರಂದು ನಡೆಯುವ ಈ ತರಬೇತಿಗೆ ಅರ್ಜಿ ಸಲ್ಲಿಸಲು 21-11-2025 ಕೊನೆ ದಿನಾಂಕವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

