HomeLatest Newsಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ತಂತ್ರಜ್ಞಾನದ ವಿಫುಲ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ...

ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ತಂತ್ರಜ್ಞಾನದ ವಿಫುಲ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಕರೆ

ಬೆಂಗಳೂರು: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು.

ಈ ಶೃಂಗಸಭೆಯಲ್ಲಿ, ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025–2030, ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030, ಮತ್ತು ಸ್ಟಾರ್ಟ್ಅಪ್ ನೀತಿ 2025-2030 ಗಳಂತಹ ಮೂರು ಪ್ರಮುಖ ನೀತಿಗಳನ್ನು ರಚಿಸುವ ಮೂಲಕ ಐತಿಹಾಸಿಕ ಹೆಜ್ಜೆಯನ್ನು ಇಡಲಾಗಿದೆ. ದತ್ತಾಂಶ ಚಾಲಿತ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾದ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿಯಿಂದ, ರಾಜ್ಯವನ್ನು ನಾವೀನ್ಯತೆ ಮತ್ತು ಡೀಪ್ ಟೆಕ್ ಗಳಿಗೆ ಜಾಗತಿಕ ತಾಣವಾಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. 2034 ರ ವೇಳೆಗೆ ಕರ್ನಾಟಕವನ್ನು ಭಾರತದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಪರಿವರ್ತಿಸುವ ನಮ್ಮ ಗುರಿಗೆ ಬಾಹ್ಯಾಕಾಶ ತಂತ್ರಜ್ಞಾ ನೀತಿ 2025-30 ಸಹಕಾರಿಯಾಗಲಿದೆ. ಹೊಸ ಸ್ಟಾರ್ಟ್ಅಪ್ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ ಬಂಡವಾಳ ನೆರವು, ಮಾರುಕಟ್ಟೆ ಅವಕಾಶ, ಮೂಲಸೌಲಭ್ಯ, ಕೌಶಲ್ಯಾಭಿವೃದ್ಧಿಯಂತಹ ಕ್ರಮಗಳ ಮೂಲಕ 25,000 ಸ್ಟಾರ್ಟ್ಅಪ್ಗಳ ಸ್ಥಾಪನೆಗೆ ನೆರವಾಗುವ ಗುರಿಯನ್ನು ಸರ್ಕಾರ ಹೊಂದಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಮೂರು ದಶಕಗಳಿಂದ ಬೆಂಗಳೂರಿನಲ್ಲಿ ಸಮಾವೇಶಗೊಳ್ಳುತ್ತಿರುವ  ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು  ಅಂತರರಾಷ್ಟ್ರೀಯ ಸಹಭಾಗಿತ್ವದಲ್ಲಿ ನಾವೀನ್ಯತೆ  ಮತ್ತು ತಂತ್ರಜ್ಞಾನದಲ್ಲಿ ಹೊಸ  ಆವಿಷ್ಕಾರಗಳನ್ನು ಸಂಶೋಧಿಸಿ, ಸೃಷ್ಟಿಸಿ   ಹೊಸ ದಿಕ್ಕಿನಲ್ಲಿ ಹೆಜ್ಜೆಗಳನ್ನಿಟ್ಟು ವಿಶ್ವದ ಗಮನವನ್ನು ಕರ್ನಾಟಕದತ್ತ ಸೆಳೆಯುತ್ತಿದೆ ಎಂದರು.

  
ಈ ಸಮಾವೇಶದಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ಪರಿಣತರು ತಮ್ಮ  ಜ್ಞಾನ, ಕೌಶಲ್ಯಗಳನ್ನು ಈ ವೇದಿಕೆಯಲ್ಲಿ ಹಂಚಿಕೊಂಡು ರಾಜ್ಯದ ಭವಿಷ್ಯವನ್ನು ರೂಪಿಸುವಲ್ಲಿ ಪರಿವರ್ತನೆಯ ಹರಿಕಾರರಾಗುತ್ತಾರೆಂದು ಎಂದರು .

ಪರಿವರ್ತನೆಯ ಮನ್ವಂತರಕ್ಕೆ ವೇದಿಕೆ:
ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ಒಂದು ಸಮಾವೇಶಕ್ಕಿಂತಲೂ ಹೆಚ್ಚಾಗಿ ಹೊಸ ಹೊಸ ವಿಚಾರಗಳು, ಸಂವಾದಗಳು, ಬಂಡವಾಳ ಹೂಡಿಕೆ ಆವಿಷ್ಕಾರ ಮತ್ತು ಪರಿವರ್ತನೆಯ ಮನ್ವಂತರಕ್ಕೆ ವೇದಿಕೆಯಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಹಲವು ಉತ್ತಮ ಅವಕಾಶಗಳಿಗೆ ಜಾಗತಿಕ ವೇದಿಕೆಯಾಗಿ ಹೊಸ ಮುನ್ನುಡಿ ಬರೆಯಲಿ ಎಂದು ಹಾರೈಸುತ್ತೇನೆ ಎಂದರು.

ಈ  ವರ್ಷದ ಧ್ಯೇಯವಾಕ್ಯ: “ಭವಿಷ್ಯೀಕರಣಗೊಳ್ಳಿ-ಅಜ್ಞಾತವನ್ನು ರೂಪಿಸುತ್ತಾ, ಊಹಿಸಿಲಾಗದ್ದನ್ನು ಅಳೆಯುತ್ತಾ , ಜಗತ್ತನ್ನು ಮುಂದೆ  ಕೊಂಡೊಯ್ಯುವುದು” ಎಂಬುದಾಗಿದೆ. ಈ ಆಶಯ  ನಮ್ಮ ಸಾಮೂಹಿಕ ಧ್ಯೇಯದ  ಸಂಕಲ್ಪವನ್ನು ಎತ್ತಿ ಹಿಡಿಯುತ್ತದೆ. ಈ ಧ್ಯೇಯ ವಾಕ್ಯದ ಆಶಯದಂತೆ ಬೆಂಗಳೂರು  ತಂತ್ರಜ್ಞಾನ ಶೃಂಗಸಭೆ- 2025, ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ600ಕ್ಕೂ ಹೆಚ್ಚು ಜಾಗತಿಕ ಭಾಷಣಕಾರರು, 1200ಕ್ಕೂ ಹೆಚ್ಚು ಪ್ರದರ್ಶಕರು, 60ಕ್ಕೂ ಹೆಚ್ಚು ದೇಶದ ನಿಯೋಗಗಳು ಮತ್ತು ಸಾವಿರಾರು ಪರಿಣತರು ಮುಂದಿನ ದಶಕಗಳಲ್ಲಿ ತಂತ್ರಜ್ಞಾನದ ರೂಪುರೇಷೆಗಳನ್ನು , ಹೊಸ ಸಾಧ್ಯತೆಗಳನ್ನು ಇಲ್ಲಿ ಸಂವಾದಿಸಿ, ಕೇವಲ ಕರ್ನಾಟಕಕ್ಕಾಗಲಿ ಅಥವಾ ಭಾರತಕ್ಕೆ ಆಗಲಿ ಮಾತ್ರವಲ್ಲ, ಇಡೀ ಜಗತ್ತಿಗೇ ತೆರೆದಿಡುತ್ತಾರೆ .

ಬೆಂಗಳೂರು ತಂತ್ರಜ್ಞಾನ ಶೃಂಗಸಭೆ- 2025  ಪರಿವರ್ತನೆಯ ಹರಿಕಾರ ಎಂಬುದನ್ನು ಈಗಾಗಲೇ ಹೇಳಿದ್ದೇನೆ. ಇದು ಶೈಕ್ಷಣಿಕ ವಲಯವನ್ನು ಉದ್ಯಮಕ್ಕೆ ಬೆಸೆಯುತ್ತದೆ.  ನವೋದ್ಯಮಗಳನ್ನು ಹೂಡಿಕೆದಾರರಿಗೆ ಪರಿಚಯಿಸುತ್ತದೆ. ಅನ್ಯ ದೇಶಗಳ ಪರಿಣಿತರನ್ನು ಸಂಶೋಧಕರನ್ನು, ನೀತಿ ನಿರೂಪಕರನ್ನು ಪರಸ್ಪರ ಬೆಸೆಯುವುದಲ್ಲದೇ ,  ಜಾಗತಿಕ ಮಾರುಕಟ್ಟೆಗಳನ್ನು ಸಂಪರ್ಕಿಸಲು ಬೃಹತ್ ವೇದಿಕೆಯಾಗಿದೆ ಎಂಬುದನ್ನು ಹೆಮ್ಮೆಯಿಂದ ಹೇಳುತ್ತೇನೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular