ನವದೆಹಲಿ: ಆನ್ ಲೈನ್ ಗೇಮಿಂಗ್ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ವಿನ್ ಜೋ, ಗೇಮ್ಸ್ ಕ್ರಾಫ್ಟ್ ಸೇರಿದಂತೆ ವಿವಿಧ ಆನ್ ಲೈನ್ ಗೇಮಿಂಗ್ ಕಂಪನಿಗಳ ಮೇಲೆ ದಾಳಿ ನಡೆದಿದೆ. ಬೆಂಗಳೂರು, ದೆಹಲಿ, ಗುರುಗ್ರಾಮ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಆನ್ ಲೈನ್ ಗೇಮಿಂಗ್ ಕಂಪನಿಗಳ ಕಾರ್ಪೊರೇಟ್ ಕಚೇರಿ, ಸಿಇಒ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಅಧಿಕಾರಿಗಳ ತಪಾಸಣೆ ವೇಳೆ ಅಕ್ರಮ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ. ಕ್ರೊಪ್ಟೋ ವ್ಯಾಲೆಟ್ ಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.
