ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಖುದ್ದು ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಡಿಸೆಂಬರ್ 2ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ 1ನೇ ತ್ವರಿತ ನ್ಯಾಯಾಲಯದಿಂದ ಸಮನ್ಸ್ ಜಾರಿಗೆ ಆದೇಶ ಹೊರಡಿಸಲಾಗಿದೆ.
ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿತ್ತು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ತನಿಖೆ ಮುಂದುವರೆಯಲಿದ್ದು, 1ನೇ ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೆ ಸೂಚಿಸಿದೆ.
