ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿದ್ದು, 33 ಮಾಲಾಧಾರಿಗಳು ಅಪಾಯದಿಂದ ಪಾರಾಗಿದ್ದಾರೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮಲೈ ಸಮೀಪ ಅಪಘಾತ ಸಂಭವಿಸಿದೆ.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದಿಂದ 33 ಮಾಲಾಧಾರಿಗಳು ತೆರಳಿದ್ದರು. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ 33 ಅಯ್ಯಪ್ಪ ಮಾಲಾಧಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗೊಂಡಿದ್ದ ಮಾಲಾಧಾರಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
